ನವದೆಹಲಿ: ಸೋಷಿಯಲ್ ಮೀಡಿಯಾದಿಂದ ಪ್ರಧಾನಿ ನರೇಂದ್ರ ಮೋದಿ ತಾಯಿಯ ಎಐ ವಿಡಿಯೋ ತೆಗೆದುಹಾಕಿ ಎಂದು ಕಾಂಗ್ರೆಸ್‌ಗೆ ಹೈಕೋರ್ಟ್ ಸೂಚನೆ ನೀಡಿದೆ.
ಪಕ್ಷದ ಬಿಹಾರ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿ ಅವರ ವಿವಾದಾತ್ಕ ಕೃತಕ ಬುದ್ದಿಮತ್ತೆ ಆಧಾರಿತ ವಿಡಿಯೋವನ್ನು ತೆಗೆದುಹಾಕುವಂತೆ ಪಾಟ್ನಾ ಹೈಕೋರ್ಟ್ ಇಂದು ನಿರ್ದೇಶನ ನೀಡಿದೆ.
ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ವಿಡಿಯೋವನ್ನು ತೆಗೆದುಹಾಕುವಂತೆ ಸೂಚನೆ ನೀಡಲಾಗಿದೆ.
ಇದೇ ಸೆಪ್ಟೆಂಬರ್.10ರಂದು ಬಿಹಾರ ಕಾಂಗ್ರೆಸ್ ಘಟಕವು 36 ಸೆಕೆಂಡುಳ ವಿಡಿಯೋವನ್ನು ಪೋಸ್ಟ್ ಮಾಡಿತ್ತು. ಇದರಲ್ಲಿ ಪ್ರಧಾನಿಯವರು ತಮ್ಮ ದಿವಂಗತ ತಾಯಿಯ ಬಗ್ಗೆ ಕನಸು ಕಾಣುತ್ತಿದ್ದಾರೆ. ಅವರು ಬಿಹಾರದಲ್ಲಿ ಚುನಾವಣೆ ನಡೆಯಲಿರುವಾಗ ತಮ್ಮ ರಾಜಕೀಯದ ಬಗ್ಗೆ ಟೀಕಿಸುತ್ತಿದ್ದಾರೆ ಎಂದು ಬರೆಯಲಾಗಿತ್ತು.





