ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ವಿಮಾನ ದರ 40,000 ರೂಗಳಿಗೆ ಏರುವುದನ್ನು ತಡೆಯಲು ಅದು ಏಕೆ ವಿಫಲವಾಯಿದೆ ಎಂದು ಪ್ರಶ್ನಿಸಿದೆ.
ಪರಿಸ್ಥಿತಿಯನ್ನು ಆತಂಕಕಾರಿ ಎಂದು ಕರೆದ ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ನೇತೃತ್ವದ ವಿಭಾಗೀಯ ಪೀಠವು, ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮತ್ತು ಬಿಕ್ಕಟ್ಟು ಭುಗಿಲೆದ್ದ ನಂತರವೇ ಕ್ರಮ ಕೈಗೊಂಡಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಇದನ್ನು ಓದಿ: ಇಂಡಿಗೊ ವಿಮಾನಯಾನ ಸಂಸ್ಥೆಯಲ್ಲಿ ಜಾತಿ ನಿಂದನೆ ಆರೋಪ : ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು
ಒಂದು ವೇಳೆ ಬಿಕ್ಕಟ್ಟು ಉಂಟಾದರೆ, ಇತರ ವಿಮಾನಯಾನ ಸಂಸ್ಥೆಗಳು ಲಾಭ ಪಡೆಯಲು ಹೇಗೆ ಅವಕಾಶ ನೀಡಬಹುದು? ಅದು 35-40 ಸಾವಿರಕ್ಕೆ ಹೇಗೆ ಹೋಗಲು ಸಾಧ್ಯ? ನೀವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಬಿಟ್ಟಿದ್ದೀರಿ ಎಂದು ನ್ಯಾಯಾಲಯ ಹೇಳಿದೆ.
ಇಂತಹ ಪರಿಸ್ಥಿತಿ ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಉಂಟು ಮಾಡುವುದಕ್ಕೆ ಸೀಮಿತವಾಗಿಲ್ಲ. ಬದಲಾಗಿ ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಅದು ಮತ್ತಷ್ಟು ಹೇಳಿದೆ.



