chanda kochhar couple
ಹೊಸದಿಲ್ಲಿ: ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್ ಅವರನ್ನು ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ನೀಡಿದೆ.
ಈ ಇಬ್ಬರನ್ನೂ 2022ರ ಡಿಸೆಂಬರ್ 23ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.ಬಳಿಕ ಅವರನ್ನು ಸಿಬಿಐ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಸೂಚಿಸಿತ್ತು. ಚಂದಾ ಕೊಚ್ಚರ್ ಮತ್ತು ದೀಪಕ್ ಕೊಚ್ಚರ್ ಅವರ ಬಂಧನ ಕಾನೂನು ಸಮ್ಮತವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಇದೀಗ ಅಭಿಪ್ರಾಯಪಟ್ಟಿದೆ.
ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್‌ಗೆ ಒದಗಿಸಿದ 3,000 ಕೋಟಿ ರೂ. ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 23 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರನ್ನು ಬಂಧಿಸಿತ್ತು.
ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ತನ್ನ ಬಂಧನ ಕಾನೂನುಬಾಹಿರವಾಗಿದೆ, ತನಿಖೆಯನ್ನು ಆರಂಭಿಸಲು ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ. ಈ ತನಿಖೆಯನ್ನು ಪ್ರಾರಂಭಿಸಲು ಸಂಸ್ಥೆಯು ಅಂತಹ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಕೊಚ್ಚರ್ ದಂಪತಿ ನ್ಯಾಯಾಲಯದ ಮುಂದೆ ವಾದಿಸಿದರು.
ಪ್ರಕರಣದ ಹಿನ್ನೆಲೆ: 2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…