ದೇಶ- ವಿದೇಶ

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಗೆ ಹೈಕೋರ್ಟ್ ಜಾಮೀನು

ಹೊಸದಿಲ್ಲಿ: ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ  ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್ ​ ಅವರನ್ನು ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ನೀಡಿದೆ.

ಈ ಇಬ್ಬರನ್ನೂ 2022ರ ಡಿಸೆಂಬರ್ 23ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.ಬಳಿಕ ಅವರನ್ನು ಸಿಬಿಐ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಸೂಚಿಸಿತ್ತು. ಚಂದಾ ಕೊಚ್ಚರ್ ಮತ್ತು ದೀಪಕ್ ಕೊಚ್ಚರ್ ಅವರ ಬಂಧನ ಕಾನೂನು ಸಮ್ಮತವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಇದೀಗ ಅಭಿಪ್ರಾಯಪಟ್ಟಿದೆ.

ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್‌ಗೆ ಒದಗಿಸಿದ  3,000 ಕೋಟಿ ರೂ. ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 23 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರನ್ನು ಬಂಧಿಸಿತ್ತು.

ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ತನ್ನ ಬಂಧನ ಕಾನೂನುಬಾಹಿರವಾಗಿದೆ, ತನಿಖೆಯನ್ನು ಆರಂಭಿಸಲು ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ. ಈ ತನಿಖೆಯನ್ನು ಪ್ರಾರಂಭಿಸಲು ಸಂಸ್ಥೆಯು ಅಂತಹ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಕೊಚ್ಚರ್‌ ದಂಪತಿ ನ್ಯಾಯಾಲಯದ ಮುಂದೆ ವಾದಿಸಿದರು.

ಪ್ರಕರಣದ ಹಿನ್ನೆಲೆ: 2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್​ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್​ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.

 

lokesh

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

15 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

15 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

17 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

18 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

18 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

22 hours ago