Mysore
31
scattered clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಅಮೇರಿಕನ್‌ ಡಾಲರ್‌ ಎದುರು ರೂಪಾಯಿ ಮೌಲ್ಯ 93 ರೂಪಾಯಿಗಳ ಗಡಿಯನ್ನು ದಾಟಿದೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಪ್ರತಿ ಡಾಲರ್‌ಗೆ 93.15ರೂಗೆ ಕುಸಿದಿದ್ದು, ಹೂಡಿಕೆದಾರರಲ್ಲಿ ಭಾರೀ ಆತಂಕ ಮೂಡಿಸಿದೆ.

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ, ಕಚ್ಚಾ ತೈಲ ಬೆಲೆ ಏರಿಕೆ, ವಿದೇಶಿ ಹೂಡಿಕೆದಾರರ ನಿರ್ಗಮನ, ಅಮೇರಿಕಾದ ಫೆಡರಲ್‌ ರಿಸರ್ವ್‌ ನಿಲುವುಗಳು ರೂಪಾಯಿ ಮೌಲ್ಯ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ.

ಇನ್ನು ರೂಪಾಯಿ ಮೌಲ್ಯ ಕುಸಿಯುವುದರಿಂದ ಆಮದು ಮಾಡಿಕೊಳ್ಳುವ ಸರಕುಗಳ ಬೆಲೆ ಏರಿಕೆಯಾಗಲಿದೆ. ವಿಶೇಷವಾಗಿ ಇಂಧನ ಮತ್ತು ಇತರೆ ವಸ್ತುಗಳ ಬೆಲೆ ಹೆಚ್ಚಾಗುವ ಮೂಲಕ ಹಣದುಬ್ಬರ ಉಂಟಾಗುವ ಸಾಧ್ಯತೆಯಿದೆ. ಇದು ಸಾಮಾನ್ಯ ಗ್ರಾಹಕರು ಮತ್ತು ವ್ಯಾಪಾರಸ್ಥರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ನೀಡಲಿದೆ.

 

Tags:
error: Content is protected !!