ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಅಮೇರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ 93 ರೂಪಾಯಿಗಳ ಗಡಿಯನ್ನು ದಾಟಿದೆ.
ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಪ್ರತಿ ಡಾಲರ್‌ಗೆ 93.15ರೂಗೆ ಕುಸಿದಿದ್ದು, ಹೂಡಿಕೆದಾರರಲ್ಲಿ ಭಾರೀ ಆತಂಕ ಮೂಡಿಸಿದೆ.
ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ, ಕಚ್ಚಾ ತೈಲ ಬೆಲೆ ಏರಿಕೆ, ವಿದೇಶಿ ಹೂಡಿಕೆದಾರರ ನಿರ್ಗಮನ, ಅಮೇರಿಕಾದ ಫೆಡರಲ್ ರಿಸರ್ವ್ ನಿಲುವುಗಳು ರೂಪಾಯಿ ಮೌಲ್ಯ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ.
ಇನ್ನು ರೂಪಾಯಿ ಮೌಲ್ಯ ಕುಸಿಯುವುದರಿಂದ ಆಮದು ಮಾಡಿಕೊಳ್ಳುವ ಸರಕುಗಳ ಬೆಲೆ ಏರಿಕೆಯಾಗಲಿದೆ. ವಿಶೇಷವಾಗಿ ಇಂಧನ ಮತ್ತು ಇತರೆ ವಸ್ತುಗಳ ಬೆಲೆ ಹೆಚ್ಚಾಗುವ ಮೂಲಕ ಹಣದುಬ್ಬರ ಉಂಟಾಗುವ ಸಾಧ್ಯತೆಯಿದೆ. ಇದು ಸಾಮಾನ್ಯ ಗ್ರಾಹಕರು ಮತ್ತು ವ್ಯಾಪಾರಸ್ಥರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ನೀಡಲಿದೆ.
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…