ನವದೆಹಲಿ: ನಾಗ್ಪುರದಲ್ಲಿ ಎರಡು ಮಕ್ಕಳಲ್ಲಿ ಎಚ್‌ಎಂಪಿ ವೈರಸ್ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತ ಮಕ್ಕಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಜ್ವರ ಹಾಗೂ ಕೆಮ್ಮು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ 7 ಮತ್ತು 14 ವರ್ಷ ವಯಸ್ಸಿನ ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.
ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಆರೋಗ್ಯ ಇಲಾಖೆಯು ಅಲರ್ಟ್ ಆಗಿದೆ. ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿರುವ ಜನರು ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಕೇಳಿಕೊಳ್ಳಲಾಗಿದೆ.
ಎಚ್‌ಎಂಪಿ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನತೆ ಮುಂಜಾಗ್ರತೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.





