ದೇಶ- ವಿದೇಶ

ದೇಶದಲ್ಲಿ ಎಚ್‌ಎಂಪಿವಿ ಅಬ್ಬರ: ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ

ನವದೆಹಲಿ: ನಾಗ್ಪುರದಲ್ಲಿ ಎರಡು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತ ಮಕ್ಕಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಜ್ವರ ಹಾಗೂ ಕೆಮ್ಮು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ 7 ಮತ್ತು 14 ವರ್ಷ ವಯಸ್ಸಿನ ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.

ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಆರೋಗ್ಯ ಇಲಾಖೆಯು ಅಲರ್ಟ್‌ ಆಗಿದೆ. ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿರುವ ಜನರು ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಕೇಳಿಕೊಳ್ಳಲಾಗಿದೆ.

ಎಚ್‌ಎಂಪಿ ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನತೆ ಮುಂಜಾಗ್ರತೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

4 mins ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

15 mins ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

30 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

41 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

1 hour ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

1 hour ago