Mysore
16
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಭಾರತದಲ್ಲಿ ಎಚ್‌ಎಂಪಿವಿ ವೈರಸ್‌ ಸೋಂಕು ಪತ್ತೆಯಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಎಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲೂ ಉಸಿರಾಟದ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್‌ ಗೋಯಲ್‌ ಅವರು, ಎಚ್‌ಎಂಪಿವಿ ವೈರಸ್‌ ಶೀತದಂತಹ ಲಕ್ಷಣಗಳನ್ನು ಹೊಂದಿದೆ. ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ದೇಶದಲ್ಲಿ 2024ರ ಡಿಸೆಂಬರ್‌ನಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಆದರೆ ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ. ಒಂದು ವೇಳೆ ಸಮಸ್ಯೆ ಉದ್ಬವಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಹೇಳಿದರು.

ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಲು ಸಹ ಅವರು ಸಲಹೆ ನೀಡಿದರು.

ಉಸಿರಾಟ ಸಂಬಂಧಿತ ಸಾಂಕ್ರಾಮಿಕ ರೋಗಗಳು ಮಕ್ಕಳು ಹಾಗೂ ಹಿರಿಯರಲ್ಲಿ ಅತೀ ಬೇಗನೆ ಕಾಣಿಸಿಕೊಳ್ಳುತ್ತವೆ. ಚಳಿಗಾಗವಾದ್ದರಿಂದ ಚೀನಾದಲ್ಲಿ ಕೆಲ ವೈರಸ್‌ಗಳು ಆತಂಕ ಸೃಷ್ಟಿಸುವುದು ಸಾಮಾನ್ಯವಾಗಿದೆ. ಆದರೆ ಇದರಿಂದ ಭಾರತಕ್ಕೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತದಲ್ಲಿ ಇದುವರೆಗೂ ಈ ವೈರಸ್‌ ಪತ್ತೆಯಾಗಿಲ್ಲ. ಭಾರತದ ಆರೋಗ್ಯ ವಿಭಾಗ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಹೀಗಾಗಿ ಯಾರೂ ಕೂಡ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

Tags:
error: Content is protected !!