ನವದೆಹಲಿ: ಎಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲೂ ಉಸಿರಾಟದ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ಅವರು, ಎಚ್‌ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದೆ. ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ದೇಶದಲ್ಲಿ 2024ರ ಡಿಸೆಂಬರ್‌ನಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಆದರೆ ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ. ಒಂದು ವೇಳೆ ಸಮಸ್ಯೆ ಉದ್ಬವಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಹೇಳಿದರು.
ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಲು ಸಹ ಅವರು ಸಲಹೆ ನೀಡಿದರು.
ಉಸಿರಾಟ ಸಂಬಂಧಿತ ಸಾಂಕ್ರಾಮಿಕ ರೋಗಗಳು ಮಕ್ಕಳು ಹಾಗೂ ಹಿರಿಯರಲ್ಲಿ ಅತೀ ಬೇಗನೆ ಕಾಣಿಸಿಕೊಳ್ಳುತ್ತವೆ. ಚಳಿಗಾಗವಾದ್ದರಿಂದ ಚೀನಾದಲ್ಲಿ ಕೆಲ ವೈರಸ್‌ಗಳು ಆತಂಕ ಸೃಷ್ಟಿಸುವುದು ಸಾಮಾನ್ಯವಾಗಿದೆ. ಆದರೆ ಇದರಿಂದ ಭಾರತಕ್ಕೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತದಲ್ಲಿ ಇದುವರೆಗೂ ಈ ವೈರಸ್ ಪತ್ತೆಯಾಗಿಲ್ಲ. ಭಾರತದ ಆರೋಗ್ಯ ವಿಭಾಗ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಹೀಗಾಗಿ ಯಾರೂ ಕೂಡ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…