ದೇಶ- ವಿದೇಶ

ಚೀನಾದಲ್ಲಿ ಎಚ್‌ಎಂಪಿವಿ ವೈರಸ್‌ ಅಬ್ಬರ: ಇತರೆ ದೇಶಗಳಿಗೆ ಭಾರೀ ಆತಂಕ

ನವದೆಹಲಿ: ಜಗತ್ತಿಗೆ ಕೋವಿಡ್-19 ಎನ್ನುವ ವೈರಸ್ ಕೊಟ್ಟು ಜಗತ್ತನ್ನೇ ಕಷ್ಟಕ್ಕೆ ಸಿಲುಕುವಂತೆ ಮಾಡಿದ್ದ ಚೀನಾದಲ್ಲಿ ಇದೀಗ ಹೊಸ ವೈರಸ್ ಕಾಣಿಸಿಕೊಂಡಿದ್ದು, ಚೀನಾದಲ್ಲಿ ತುರ್ತು ಸ್ಥಿತಿ ಉಂಟಾಗುವಂತೆ ಮಾಡಿದೆ. ಚೀನಾದ ಪರಿಸ್ಥಿತಿ ನೋಡಿ ಇತರೆ ದೇಶಗಳು ಕೂಡ ಆತಂಕಗೊಂಡಿವೆ. ಚೀನಾದಲ್ಲಿ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಭಾರತದಲ್ಲಿ ಕೂಡ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.

ಚೀನಾದಲ್ಲಿ ಎಚ್‍ಎಂಪಿವಿ ಹರಡುತ್ತಿದ್ದು ಭಾರತೀಯರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ನಿಭಾಯಿಸಲು ನಾವು ಸಿದ್ದವಾಗಿದ್ದೇವೆ, ಚೀನಾದಲ್ಲಿ ಇರುವ ಪರಿಸ್ಥಿತಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದೆ.

ಕಳೆದ ಕೆಲವು ವಾರಗಳಲ್ಲಿ ಚೀನಾದಲ್ಲಿ ಉಸಿರಾಟದ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ದೆಹಲಿಯಲ್ಲಿ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಚೀನಾದಲ್ಲಿ ಈಗ ಇರುವ ಪರಿಸ್ಥಿತಿ ವಿಶೇಷವೇನಲ್ಲ. ಈ ಕಾಲದಲ್ಲಿ ಅಲ್ಲಿ ಉಸಿರಾಟ, ಆರೋಗ್ಯ ಸಮಸ್ಯೆ ಸಾಮಾನ್ಯ ಎನ್ನುವ ಅಭಿಪ್ರಾಯಕ್ಕೆ ಬರಲಾಗಿದೆ. ಇನ್ಪ್ಲುಯೆನ್ಸ್‌ ವೈರಸ್, ಆರ್‌ಎಸ್ವಿ, ಎಚ್‍ಎಂಪಿವಿ ವೈರಸ್‌ಗಳು ಸಾಮಾನ್ಯ ಎಂದು ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

31 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago