ದೇಶ- ವಿದೇಶ

ಹನಿಟ್ರ್ಯಾಪ್‌ ಪ್ರಕರಣ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್‌ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್‌ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್‌ ರಾಜ್ಯದ ವಕೀಲ ವಿನಯ್‌ ಕುಮಾರ್‌ ಸಿಂಗ್‌ ಎಂಬುವವರು ಸುಪ್ರೀಂಕೋರ್ಟ್‌ ಪಿಐಎಲ್‌ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ನೀವು ಜಾರ್ಖಂಡ್‌ ರಾಜ್ಯದವರು. ಕರ್ನಾಟಕ ರಾಜ್ಯದ ಬಗ್ಗೆ ನಿಮಗೇನು ಸಂಬಂಧ?. ನ್ಯಾಯಾಧೀಶರು ಯಾಕೆ ಹನಿಟ್ರ್ಯಾಪ್‌ಗೆ ಒಳಗಾಗುತ್ತಾರೆ. ಅದನ್ನು ಜಡ್ಜ್‌ಗಳು ನೋಡಿಕೊಳ್ಳುತ್ತಾರೆ ಎಂದು ವಕೀಲ ವಿನಯ್‌ ಕುಮಾರ್‌ ಸಿಂಗ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಈ ಮೂಲಕ ಹನಿಟ್ರ್ಯಾಪ್‌ ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದ ವಕೀಲ ವಿನಯ್‌ ಕುಮಾರ್‌ರಿಗೆ ತೀವ್ರ ಮುಖಭಂಗವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

40 seconds ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago