ದೇಶ- ವಿದೇಶ

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ ಸೋಮವಾರ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯ ಯಾವುದೇ ಬಂದರುಗಳ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ ಮಾಡುವುದಾಗಿ ಪ್ರತಿಜ್ಞೆ ಮಾಡಿದೆ.

ತನ್ನ ಬಂದರುಗಳ ಮೇಲೆ ದಿಗ್ಬಂಧನ ಹೇರುವ ಅಮೆರಿಕದ ಬೆದರಿಕೆಯನ್ನು ಇರಾನ್ ಸೋಮವಾರ ಕಟುವಾಗಿ ಟೀಕಿಸಿದೆ, ಒಂದು ವೇಳೆ ದಿಗ್ಬಂಧನ ವಿಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಪರ್ಷಿಯನ್ ಕೊಲ್ಲಿ ಪ್ರದೇಶದಾದ್ಯಂತ ಸಮುದ್ರ ಭದ್ರತೆಗೆ ಗಂಭೀರ ಅಪಾಯವಿದೆ ಎಂದು ಎಚ್ಚರಿಸಿದೆ.

ಅಮೆರಿಕದ ಕ್ರಮಗಳನ್ನು ಕಾನೂನುಬಾಹಿರ ಎಂದು ಟೀಕಿಸಿದ ಇರಾನ್, ಅಂತರರಾಷ್ಟ್ರೀಯ ನೀರಿನಲ್ಲಿ ಹಡಗುಗಳ ಚಲನೆಯ ಮೇಲಿನ ನಿರ್ಬಂಧಗಳು ‘ಕಡಲ್ಗಳ್ಳತನ‘ಕ್ಕೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಮಾನದಂಡಗಳನ್ನು ಉಲ್ಲಂಘಿಸುತ್ತದೆ ಎಂದು ವಕ್ತಾರರು ಹೇಳಿದ್ದಾರೆ. ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಸಮುದ್ರದಲ್ಲಿನ ಸಮುದ್ರ ಭದ್ರತೆಯನ್ನು ಸಾಮೂಹಿಕವಾಗಿ ಎತ್ತಿಹಿಡಿಯಬೇಕು, ಇಸ್ಲಾಮಿಕ್ ಗಣರಾಜ್ಯದ ಸಶಸ್ತ್ರ ಪಡೆಗಳು ತನ್ನ ಪ್ರಾದೇಶಿಕ ನೀರಿನಲ್ಲಿ ದೇಶದ ಹಕ್ಕುಗಳು ಮತ್ತು ಸಾರ್ವಭೌಮತ್ವವನ್ನು ಕಾಪಾಡುವುದನ್ನು ‘ನೈಸರ್ಗಿಕ ಮತ್ತು ಕಾನೂನುಬದ್ಧ ಕರ್ತವ್ಯ‘ ಎಂದು ಪರಿಗಣಿಸುತ್ತವೆ ಎಂದು ಎಂದು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್‌ಕಾಸ್ಟಿಂಗ್ ಸೋಮವಾರ ವರದಿ ಮಾಡಿದೆ.

‘ಈ ಪ್ರದೇಶದ ಯಾವುದೇ ಬಂದರು ಸುರಕ್ಷಿತವಾಗಿರುವುದಿಲ್ಲ‘ ಎಂದು ಇರಾನಿನ ಮಿಲಿಟರಿ ಮತ್ತು ಕ್ರಾಂತಿಕಾರಿ ಗಾರ್ಡ್ ಪ್ರಕಟಣೆಯಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.

ಇರಾನ್ ತನ್ನ ನೀರಿನಲ್ಲಿ ಭದ್ರತೆ ಜಾರಿಗೊಳಿಸುವುದನ್ನು ಮುಂದುವರಿಸುತ್ತದೆ ಮತ್ತು ವೈರಿ ದೇಶಗಳಿಗೆ ಸಂಬಂಧಿಸಿದ ಹಡಗುಗಳನ್ನು ಆಯಕಟ್ಟಿನ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿಸಲಾಗುವುದಿಲ್ಲ ಎಂದು ಒತ್ತಿಹೇಳಲಾಗಿದೆ. ಆದರೆ ಇತರ ಹಡಗುಗಳಿಗೆ ಇರಾನಿನ ಅಧಿಕಾರಿಗಳು ನಿಗದಿಪಡಿಸಿದ ನಿಯಮಗಳಿಗೆ ಅನುಸಾರವಾಗಿ ಸಾಗಣೆಗೆ ಅವಕಾಶ ನೀಡಲಾಗುವುದು ಎಂದು ಪುನರುಚ್ಚರಿಸಿದೆ.

ಆಂದೋಲನ ಡೆಸ್ಕ್

Recent Posts

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

21 mins ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

40 mins ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

1 hour ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

2 hours ago

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

4 hours ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

5 hours ago