ದೇಶ- ವಿದೇಶ

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ ಹೇಳಿದ್ದಾರೆ.

ಭಾರತ, ಚೀನಾ, ರಷ್ಯಾ, ಇರಾಕ್‌ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರರಾಷ್ಟ್ರಗಳಿಗೆ ಹೊರ್ಮುಜ್‌ ಮೂಲಕ ಸಂಚಾರಕ್ಕೆ ಅನುಮತಿಸಿದ್ದೇವೆ ಎಂದು ಅರಾಘ್ಚಿ ಹೇಳಿರುವುದಾಗಿ ಮುಂಬೈನಲ್ಲಿರುವ ಇರಾನ್‌ ಕಾನ್ಸುಲೇಟ್‌ ಜನರಲ್‌ ಅವರು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ಸ್ನೇಹಪರ ರಾಷ್ಟ್ರಗಳ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದೇವೆ. ಹೀಗಾಗಿ, ನಾವು ಹೊರ್ಮುಜ್‌ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಲ್ಲ. ಆದರೆ ಶತ್ರುಗಳಿಗೆ ಮಾತ್ರ ಮುಚ್ಚಿದ್ದೇವೆ ಎಂದು ಅರಘ್ಚಿ ಹೇಳಿದ್ದಾರೆ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್‌ ಅವರು ಜಾಗತಿಕ ಇಂಧನ ಪೂರೈಕೆ ಅಡಚಣೆಗಳ ನಡುವೆ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದರು. ಈ ಒತ್ತಾಯದ ಬೆನ್ನಲ್ಲೇ ಇರಾನ್‌ ಹೇಳಿಕೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

2 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

2 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

3 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

3 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

3 hours ago