ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಾರ್ಷಿಕ ಕೌಟುಂಬಿಕ ಸಮಾರಂಭ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದವರ ಪಾಲಿಗೆ ಬಾವಿಯೊಂದು ಮೃತ್ಯುಕೂಪವಾಗಿ ಪರಿಣಮಿಸಿದೆ. ಘಟನೆಯಲ್ಲಿ ಆರು ಮುಗ್ಧ ಮಕ್ಕಳು ಪ್ರಾಣ ಕಳೆದುಕೊಂಡಿವೆ.
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನೀರು ತುಂಬಿದ್ದ ಬಾವಿಗೆ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.
ಮೃತಪಟ್ಟವರಲ್ಲಿ ಸುನೀಲ್ ದತ್ತಾತ್ರೇಯ ದರ್ಗೋಡೆ, ಅವರ ಪತ್ನಿ ರೇಷ್ಮಾ, ಮಗಳು ರಾಖಿ, ಸೋದರ ಸಂಬಂಧಿ ಮಾಧುರಿ ಮತ್ತು ಶ್ರಾವಣಿ ಸೇರಿದ್ದಾರೆ. ಉಳಿದಂತೆ ಆಶಾ ಅನಿಲ್ ದರ್ಗೋಡೆ, ಅವರ ಮಗ ಶ್ರೇಯಸ್, ಮಗಳು ಸೃಷ್ಟಿ ಮತ್ತು ಸೋದರ ಸಂಬಂಧಿ ಸಮೃದ್ಧಿ ಸಾವನ್ನಪ್ಪಿದ್ದಾರೆ.
ದಿಂಡೋರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…