ಮುಂಬೈ: ಚಾಕುವಿನಿಂದ ಆರು ಬಾರಿ ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸೈಫ್ ಅಲಿ ಖಾನ್ ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಕಳೆದ ಗುರುವಾರ ಮುಂಜಾನೆ ಸೈಫ್ ಅಲಿ ಖಾನ್ ನಿವಾಸಕ್ಕೆ ನುಗ್ಗಿದ ವ್ಯಕ್ತಿ ನಟನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದ. ನಟನ ಮೈಮೇಲೆ ಆರು ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎಲ್ಲಾ ಚಿಕಿತ್ಸೆಗಳಿಗೂ ಬಾಲಿವುಡ್ ನಟ ಉತ್ತಮವಾಗಿ ಸ್ಪಂದಿಸಿದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.