Mysore
21
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಕ್ಕಳ ಸಜೀವ ದಹನ

ಉತ್ತರಪ್ರದೇಶ: ಇಲ್ಲಿನ ಝಾನ್ಸಿಯಾ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

ಶುಕ್ರವಾರ ರಾತ್ರಿ 10:45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಆಕ್ಸಿಜನ್‌ ಕಾನ್ಸೆಂಟ್ರೇಟರ್‌ ಒಳಗೆ ಶಾರ್ಟ್‌ ಸರ್ಕ್ಯೂಟ್‌ ಆಗಿ ಬೆಂಕಿ ಸಂಭವಿಸಿದೆ. ಕುರಿತು ತನಿಖೆ ನಡೆಸುವುದಕ್ಕಾಗಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅವಿನಾಶ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಮಕ್ಕಳನ್ನು ಕಾಪಾಡಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳು ಸಹ ಜೀವ ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದರಿಂದ ಆಸ್ಪತ್ರೆಯಲ್ಲಿ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣವಾಗಿತ್ತು. ಈ ವೇಳೆ ಕಿಟಕಿ ಗಾಜುಗಳನ್ನು ಒಡೆದು ರೋಗಿಗಳನ್ನು ಪಾರುಮಾಡಲು ಪ್ರಯತ್ನಿಸಿದರು.

ಜಿಲ್ಲಾಡಳಿತ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಯಿಸಿ, ರಕ್ಷಣಾ ಕಾರ್ಯ ಕೈಗೊಂಡಿದ್ದರು.

ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ಘೋಷಣೆ
ಇನ್ನೂ ಘಟನೆಯಲ್ಲಿ ಸಾವನ್ನಪ್ಪಿದ ಮಕ್ಕಳ ಕುಟುಂಬಗಳಿಗೆ 5ಲಕ್ಷ ಆರ್ಥಿಕ ನೆರವು ಹಾಗೂ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ.

Tags: