ಉತ್ತರಪ್ರದೇಶ: ಇಲ್ಲಿನ ಝಾನ್ಸಿಯಾ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ಶುಕ್ರವಾರ ರಾತ್ರಿ 10:45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಆಕ್ಸಿಜನ್ ಕಾನ್ಸೆಂಟ್ರೇಟರ್ ಒಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಸಂಭವಿಸಿದೆ. ಕುರಿತು ತನಿಖೆ ನಡೆಸುವುದಕ್ಕಾಗಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವಿನಾಶ್ ಕುಮಾರ್ ತಿಳಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಮಕ್ಕಳನ್ನು ಕಾಪಾಡಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳು ಸಹ ಜೀವ ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದರಿಂದ ಆಸ್ಪತ್ರೆಯಲ್ಲಿ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣವಾಗಿತ್ತು. ಈ ವೇಳೆ ಕಿಟಕಿ ಗಾಜುಗಳನ್ನು ಒಡೆದು ರೋಗಿಗಳನ್ನು ಪಾರುಮಾಡಲು ಪ್ರಯತ್ನಿಸಿದರು.
ಜಿಲ್ಲಾಡಳಿತ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಯಿಸಿ, ರಕ್ಷಣಾ ಕಾರ್ಯ ಕೈಗೊಂಡಿದ್ದರು.
ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ಘೋಷಣೆ
ಇನ್ನೂ ಘಟನೆಯಲ್ಲಿ ಸಾವನ್ನಪ್ಪಿದ ಮಕ್ಕಳ ಕುಟುಂಬಗಳಿಗೆ 5ಲಕ್ಷ ಆರ್ಥಿಕ ನೆರವು ಹಾಗೂ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…