ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದಿಲ್ಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ.
ರಾಷ್ಟ್ರ ರಾಜಧಾನಿ ದಿಲ್ಲಿಯ ಆನಂದ್ ವಿಹಾರ್‌ನಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ಬಳಿ ಇದ್ದ ಸುಮಾರು ೨ ಸಾವಿರ ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.
ಬಂಧಿತರ ವಶದಿಂದ ೨,೦೦೦ ಜೀವಂತ ಕಾಟ್ರಿಡ್ಜ್‌ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ದಿಲ್ಲಿ ಪೂರ್ವ ವಲಯ ಎಸಿಪಿ ವಿಕ್ರಮಜಿತ್ ಸಿಂಗ್ ಅವರು, ಈ ಮದ್ದುಗುಂಡುಗಳನ್ನು ಆರೋಪಿಗಳು ಉತ್ತರ ಪ್ರದೇಶದ ಲಖನೌಗೆ ಕಳ್ಳಸಾಗಣೆ ಮಾಡುತ್ತಿದ್ದರು. ಮೇಲ್ನೋಟಕ್ಕೆ ಇದು ಅಪರಾಧ ಜಾಲದ ಒಂದು ಭಾಗವಾಗಿ ಕಂಡುಬರುತ್ತದೆ. ಪ್ರಕರಣದಲ್ಲಿ ಭಯೋತ್ಪಾದನೆಯ ಕೋನವನ್ನು ತಳ್ಳಿಹಾಕಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಆಗಸ್ಟ್ ೧೫ ರಂದು ಭಾರತ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸರು ಗಸ್ತು ಮತ್ತು ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಮೆಟ್ರೋ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಮಾರುಕಟ್ಟೆಗಳು ಸೇರಿದಂತೆ ದಿಲ್ಲಿಯ ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…