Mysore
14
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ತಿರುಪತಿಯಲ್ಲಿ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ 129.45 ಕೋಟಿ ಹಣ ಸಂಗ್ರಹ

tirupati

ಅಮರಾವತಿ: ತಿರುಪತಿ ತಿಮ್ಮಪ್ಪನ ಹುಂಡಿಗೆ ಕೋಟಿ ಕೋಟಿ ಹಣ ಬೀಳುತ್ತಿದೆ. ಕಳೆದ ತಿಂಗಳು ಹುಂಡಿಗೆ ಭಕ್ತರು ಬರೊಬ್ಬರಿ 129 ಕೋಟಿ ರೂ.ಗಳ ಕಾಣಿಕೆ ಸಲ್ಲಿಸಿದ್ದಾರೆ.

ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ.

2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ಸಲಕ್ಕಿಂತ 4.09 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಮೂಲಗಳು ತಿಳಿಸಿವೆ.

ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ತೆರೆದಿದ್ದರೂ ಕೂಡ ಜುಲೈನಲ್ಲಿ ಭಕ್ತರ ಬರುವಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. ಈ ವರ್ಷ ಇಲ್ಲಿಯವರೆಗೆ 23.76 ಲಕ್ಷ ಭಕ್ತರು ತಿರುಪತಿಗೆ ಆಗಮಿಸಿ, ದರ್ಶನ ಪಡೆದುಕೊಂಡಿದ್ದಾರೆ.

ಟಿಟಿಡಿ ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ವರ್ಷಕ್ಕಿಂತ ಈ ವರ್ಷ ಭಕ್ತರ ಸಂಖ್ಯೆಯಲ್ಲಿ ಶೇ.7.4ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

Tags:
error: Content is protected !!