ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಅಪಹಾಸ್ಯ ಹಾಗೂ ತಪ್ಪು ಮಾಹಿತಿ ರವಾನೆ ಮಾಡುತ್ತಿದ್ದ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳಿಗೆ ನಿಷೇಧ ಹೇರಲಾಗಿದೆ.
ಈ ಬಗ್ಗೆ ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿದ್ದು, ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್‌ಜೂ ಕಾಜ್ಮೀ ಖಾತೆಯನ್ನು ಸಹ ಸ್ಥಗಿತಗೊಳಿಸಲಾಗಿದೆ.
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ತಪ್ಪು ಮಾಹಿತಿ ಹಾಗೂ ಗೊಂದಲದ ಅಪಹಾಸ್ಯ ಮಾಡಿದ್ದವು.
ಇದರ ಜೊತೆಗೆ ಮೃತರು ಹಾಗೂ ಭಾರತೀಯ ಸೇನೆಯನ್ನು ಸಹ ಅಪಹಾಸ್ಯ ಮಾಡುವುದರೊಂದಿಗೆ ಪ್ರಧಾನಿ ಮೋದಿಯವರನ್ನು ದೂಷಿಸುವವರೆಗೆ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದರು.
ಈ ಹಿನ್ನೆಲೆಯಲ್ಲಿ ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳಿಗೆ ನಿಷೇಧ ಹೇರಲಾಗಿದ್ದು, ಮುಂದಿನ ದಿನಗಳಲ್ಲಿ ಭಾರತ ಸರ್ಕಾರ ಪಾಕ್‌ಗೆ ಇನ್ನಷ್ಟು ತಕ್ಕ ಉತ್ತರ ಕೊಡಲು ಸಜ್ಜಾಗಿದೆ.





