ದೇಶ- ವಿದೇಶ

ಕುರ್ಕುರೆ ತರಲಿಲ್ಲವೆಂದು ಗಂಡನಿಗೆ ಡಿವೋರ್ಸ್‌ ನೀಡಲು ಮುಂದಾದ ಹೆಂಡತಿ

ಉತ್ತರ ಪ್ರದೇಶ: ಗಂಡ ತನಗೆ ಕುರ್ಕುರೆ ತರಲಿಲ್ಲ ಎಂದು ಮುನಿಸಕೊಂಡ ಹೆಂಡತಿ ಗಂಡನ ವಿರುದ್ಧ ಪೊಲೀಸ್‌ ಠಾಣಾ ಮೆಟ್ಟಿಲೇರಿದ್ದು, ಈ ಪ್ರಕರಣ ಡಿವೋರ್ಸ್‌ ಹಂತಕ್ಕೆ ತಲುಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಆಜ್‌ ತಕ್‌ ನೀಡಿರುವ ವರದಿಯ ಪ್ರಕಾರ, ಮಹಿಳೆಯೂ ಕಳೆದ ಒಂದೂರವರೆ ತಿಂಗಳಿನಿಂದ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಾರೆ. ಗಂಡ ತನ್ನನ್ನು ನೋಡಲು ಬಂದ ವೇಳೆ ಮಹಿಳೆ ಗಂಡನ ಮೇಲೆ ದೂರು ನೀಡಲು ಠಾಣೆ ಬಂದಿದ್ದಾಳೆ.

ಮಹಿಳೆ ನೀಡಿದ ದೂರಿನ ಮೇಲೆ ವಿಚಾರಣೆ ನಡೆಸಿದಾಗ ಇವರಿಬ್ಬರ ನಡುವೆ 5ರೂ ಕುರ್ಕುರೆಗೆ ಜಗಳ ಬಂದಿದೆ ಎಂಬುದು ಗೊತ್ತಾಗಿದೆ.

ಈ ಇಬ್ಬರಿಗೂ ಕೌನ್ಸಿಲಿಂಗ್‌ ಮಾಡಿದ ಡಾ. ಸತೀಶ್‌ ಅವರು ಹೇಳುವಂತೆ ಕಳೆದ ವರ್ಷ ಈ ಇಬ್ಬರಿಗೂ ಮದುವೆಯಾಗಿತ್ತು. ಮದುವೆಯಾದಾಗಿನಿಂದ ಪತಿ ನನಗೆ ಒಡೆಯುತ್ತಾನೆ ಎಂದು ಮಹಿಳೆ ದೂರು ನೀಡಿದರೇ, ಗಂಡ ಕೇವಲ ಐದು ರೂಪಾಯಿಯ ಕುರ್ಕುರೆಗೆ ಜಗಳ ಆಡುತ್ತಾಳೆ. ಕುರ್ಕುರೆಗಾಗಿ ತಾಯಿಯ ಮೆನೆಗೆ ಹೋಗಿದ್ದಾಳೆ ಎಂದು ಗಂಡ ಮಾಹಿತಿ ನೀಡಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿಂತೆ ಇಬ್ಬರು ರಾಜೀಯಾಗುವ ಸಾಧ್ಯತೆಯಿದ್ದು, ಮುಂದಿನ ದಿನಾಂಕ ನಿಗದಿವರೆಗೆ ಪ್ರಕರಣವನ್ನು ಮುಂದೂಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

1 hour ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

1 hour ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

1 hour ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

1 hour ago