ಹೈದರಾಬಾದ್ : ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ.
ಘಟನೆ ಬಗ್ಗೆ ಸಿಎಂ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಳಿಗ್ಗೆ 6;30ರ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಬಂದಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಹಲವರು ಪ್ರಜ್ಞಾಹೀನರಾಗಿ ಪತ್ತೆಯಾಗಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಮೃತರಲ್ಲಿ ಆರು ಮಕ್ಕಳು ಸೇರಿದಂತೆ 17 ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಅಗ್ನಿ ದುರಂತದ ಬಗ್ಗೆ ಆಂಧ್ರಪ್ರದೇಶದ ಸಚಿವರು ಸೇರಿದಂತೆ ಕೇಂದ್ರ ನಾಯಕರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿಯು ಸಂತಾಪ ಸೂಚಿಸಿದ್ದು, ಮೃತ ಸಂಬಂಧಿಕರಿಗೆ ಪಿಎಂ ನಿಧಿಯಿಂದ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ .ರೂ ಪರಿಹಾರ ಘೋಷಿಸಿದ್ದಾರೆ.





