ಉತ್ತರ ಪ್ರದೇಶ: ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವ ಉತ್ತರ ಪ್ರದೇಶದ ಸಂಭಲ್‌ಗೆ ತೆರಳಲು ಹೊರಟಿದ್ದ ರಾಹುಲ್ ಗಾಂಧಿ ಅವರನ್ನು ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರಾಹುಲ್ ಗಾಂಧಿ ಅವರು, ನಾವು ಸಂಭಲ್‌ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪೊಲೀಸರು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಸಂಭಲ್‌ಗೆ ಭೇಟಿ ನೀಡುವುದು ನನ್ನ ಹಕ್ಕು.
ಪೊಲೀಸರ ಜೊತೆ ಒಬ್ಬನೇ ತೆರಳಲು ನಾನು ಸಿದ್ಧನಿದ್ದೇನೆ. ಆದರೂ ನನಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರಿದ್ದಾರೆ.
ಕೆಲವು ದಿನಗಳ ನಂತರ ನನ್ನ ಭೇಟಿಗೆ ಅವಕಾಶ ನೀಡುವುದಾಗಿ ಹೇಳುತ್ತಾರೆ. ಆದರೆ ಇದು ಲೋಕಸಭೆ ವಿರೋಧ ಪಕ್ಷದ ನಾಯಕನ ಹಕ್ಕುಗಳಿಗೆ ವಿರುದ್ಧವಾಗಿದೆ. ಅವರು ನನಗೆ ಅವಕಾಶ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ.
ನಾನು ಸಂಭಲ್‌ಗೆ ಭೇಟಿ ನೀಡಿ ಅಲ್ಲಿ ಜನರನ್ನು ಭೇಟಿ ಮಾಡಿ ಏನಾಯಿತು ಎಂದು ತಿಳಿದುಕೊಳ್ಳಲು ಬಯಸುತ್ತೇನೆ. ಆದರೆ ನನ್ನ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿದೆ ಎಂದು ಪೊಲೀಸರ ವಿರುದ್ಧ ಕಿಡಿಕಾರಿದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…