ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮನ್ನು ತಾವೇ ವೆನಿಜುವೆಲಾ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿದ್ದಾರೆ.
ಭಾನುವಾರ ತಮ್ಮ ಸಾಮಾಜಿಕ ಜಾಲತಾಣವಾದ ಟ್ರುತ್ ಸೋಷಿಯಲ್‌ನಲ್ಲಿ ಈ ಬಗ್ಗೆ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.
ಅಮೇರಿಕಾದ 45ನೇ ಮತ್ತು 47ನೇ ಅಧ್ಯಕ್ಷರಾಗಿರುವ ಟ್ರಂಪ್, ತಮ್ಮ ಭಾವಚಿತ್ರದೊಂದಿಗೆ ವೆನಿಜುವೆಲಾ ಹಂಗಾಮಿ ಅಧ್ಯಕ್ಷ ಜನವರಿ-2026ರಿಂದ ಅಧಿಕಾರರೂಢ ಎಂದು ನಮೂದಿಸಿಕೊಂಡಿದ್ದಾರೆ. ಈ ನಡೆ ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ.





