ನವದೆಹಲಿ : ಇವಿಎಂ ಬಗ್ಗೆ ನಮಗೆ ನಿನ್ನೆಯೂ ಭರವಸೆ ಇಲ್ಲ, ಇಂದೂ ಸಹ ಭರವಸೆ ಇಲ್ಲ. ಉತ್ತರ ಪ್ರದೇಶದಲ್ಲಿ ೮೦ಕ್ಕೆ ೮೦ ಸೀಟು ಗೆದ್ದರೂ ಕೂಡ ನನಗೆ ಈ ಇವಿಎಂ ಮೇಲೆ ನಂಬಿಕೆ ಮಾತ್ರ ಬರಲ್ಲ ಎಂದು ಎಸ್ ಪಿ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲೋಕಸಭೆ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಮಾತನಾಡಿದ ಅವರು, ಇವಿಎಂ ವಿರುದ್ಧ ಎಸ್ ಪಿ ಹೋರಾಟ ಮಾಡುತ್ತಲೇ ಇರುತ್ತದೆ. ಇವಿಎಂ ಮೂಲಕವೇ ಗೆದ್ದು ಇವಿಎಂ ರದ್ದು ಮಾಡುತ್ತೇವೆ ಎಂದು ಹೇಳಿದರು. ಇನ್ನು ಇವರ ಹೇಳಿಕೆ ರಾಹುಲ್ ಗಾಂಧಿ, ದಯಾನಿಧಿ ಮಾರನ್ ಸೇರಿ ಪ್ರತಿಪಕ್ಷ ನಾಯಕರು ಬೆಂಚು ಕುಟ್ಟಿ ಬೆಂಬಲ ವ್ಯಕ್ತಪಡಿಸಿದರು.
ಬಳಿಕ ಉತ್ತರ ಪ್ರದೇಶಕ್ಕೆ ಬಹಳ ಅನ್ಯಾಯವಾಗಿದೆ. ಮೂಲಸೌಕರ್ಯಗಳ ವಿಚಾರದಲ್ಲಿ ಮಾತ್ರ ಅನ್ಯಾಯವಾಗಿಲ್ಲ. ಮೋದಿ ಅವರು ತಾನು ದತ್ತು ಪಡೆದ ಗ್ರಾಮ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು. ಆದರೆ ಆ ಗ್ರಾಮ ಇನ್ನೂ ಅಭಿವೃದ್ಧಿಯಾಗಿಲ್ಲ. ದತ್ತು ಪಡೆದ ಮೇಲೆ ಅಭಿವೃದ್ಧಿ ಮಾಡದೆ ಅನಾಥ ಮಾಡುವುದು ಸರಿಯಲ್ಲ ಎಂದರು.
ಜೊತೆಗೆ ಅಗ್ನಿವೀರ್ ಮೂಲಕ ರಕ್ಷಣಾ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ನಾವು ಎಂದಿಗೂ ಆ ಯೋಜನೆಯನ್ನ ಸ್ವೀಕರಿಸುವುದಿಲ್ಲ. ಇಂಡಿಯಾ ಒಕ್ಕೂಟ ಯಾವಾಗ ಅಧಿಕಾರಕ್ಕೆ ಬಂದರೂ ಅದನ್ನ ರದ್ದು ಮಾಡುತ್ತೇವೆ ಎಂದು ಹೇಳಿದರು
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…