Mysore
19
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

DK Shivakumar

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಈ ನಡುವೆ ನಿನ್ನೆಯೇ ದೆಹಲಿಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅಲ್ಲಿ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭೇಟಿಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಅಸ್ಸಾಂ ಸೇರಿ ಬೇರೆ ಬೇರೆ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷದ ವರಿಷ್ಠರ ಜೊತೆ ಮಾತನಾಡಿದ್ದೇನೆ. ಯಾರ್ಯಾರ ಹತ್ತಿರ ಮಾತನಾಡಿದ್ದೇನೆ ಎಂದು ಹೇಳಬೇಕಿಲ್ಲ. ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ ಎಂದು ಹೇಳಿದರು.

ನಾನು ದೆಹಲಿಗೆ ಬಂದಿರೋದೆ ರಾಜಕೀಯ ಮಾಡೋದಕ್ಕ. ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದು ಹೇಳಿದರು.

 

 

 

Tags:
error: Content is protected !!