DK Shivakumar
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಈ ನಡುವೆ ನಿನ್ನೆಯೇ ದೆಹಲಿಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಭೇಟಿಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಅಸ್ಸಾಂ ಸೇರಿ ಬೇರೆ ಬೇರೆ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷದ ವರಿಷ್ಠರ ಜೊತೆ ಮಾತನಾಡಿದ್ದೇನೆ. ಯಾರ್ಯಾರ ಹತ್ತಿರ ಮಾತನಾಡಿದ್ದೇನೆ ಎಂದು ಹೇಳಬೇಕಿಲ್ಲ. ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ ಎಂದು ಹೇಳಿದರು.
ನಾನು ದೆಹಲಿಗೆ ಬಂದಿರೋದೆ ರಾಜಕೀಯ ಮಾಡೋದಕ್ಕ. ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದು ಹೇಳಿದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…