ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನಾನು ರಾಹುಲ್ ಗಾಂಧಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ನಾನು ಯಾರನ್ನೂ ಭೇಟಿ ಮಾಡಿಲ್ಲ. ವಿದೇಶದಿಂದ ರಾಹುಲ್ ಗಾಂಧಿ ನಿನನೆ ಆಗಮಿಸಿದ್ದು, ಅವರಿಗೆ ಈಗ ತೊಂದರೆ ನೀಡಲು ಹೋಗುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ಇರಲು ಇಷ್ಟಪಡುತ್ತೇನೆ ಎಂದು ಹೇಳಿದರು.
ಇನ್ನು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹೇಳಿದರು.





