Mysore
24
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಾವೇನೂ ದೇಶದಿಂದ ಶಾಶ್ವತವಾಗಿ ಓಡಿಬಂದಿಲ್ಲ. ಅಲ್ಲಿನ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಮತ್ತು ತಮ್ಮ ಅವಾಮಿ ಲೀಗ್‌ ಪಕ್ಷದ ಕಾರ್ಯಕರ್ತರಲ್ಲಿ ಧೈರ್ಯ ತುಂಬಲು ಶೀಘ್ರದಲ್ಲೇ ಮರಳುವುದಾಗಿ ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ತಮಗೆ ಎದುರಾದ ಪರಿಸ್ಥಿತಿಯ ಹಿಂದೆ ವಿದೇಶಿ ಶಕ್ತಿಗಳ ಕೈವಾಡ ಮತ್ತು ವ್ಯವಸ್ಥಿತ ರಾಜಕೀಯ ಪಿತೂರಿ ಇತ್ತು ಎಂದು ಪುನರುಚ್ಚರಿಸಿದ್ದಾರೆ. ದೇಶದಲ್ಲಿ ಶಾಂತಿ ಕದಡಲು ಹವಣಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡಲು ತಾವು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ.

 

Tags:
error: Content is protected !!