ಕೊಯಮತ್ತೂರು: ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಅವರು, ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ. ಬೇಡವೆನಿಸಿದರೆ ಕೃಷಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯ ಸ್ವಯಂಪ್ರೇರಿತ ಕ್ಷೇತ್ರವಾಗಿದ್ದು, ಇಲ್ಲಿ ನಮ್ಮ ಹಣವನ್ನೇ ನಾವು ಖರ್ಚು ಮಾಡುತ್ತೇವೆ. ತಲೆಯ ಮೇಲೆ ಬಂದೂಕು ಹಿಡಿದು ಯಾರನ್ನೂ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಾಜಕೀಯ ಹಿನ್ನೆಲೆ ಇಲ್ಲದ ಕೃಷಿಕ ಕುಟುಂಬದಿಂದ ಬಂದ ನನಗೆ ನನ್ನ ಇತಿಮಿತಿಗಳು ಗೊತ್ತಿವೆ. ಹೊಸ ಪಕ್ಷ ಪ್ರಾರಂಭಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಕೆಲವೊಮ್ಮೆ ಆತ್ಮಸಾಕ್ಷಿಗೆ ವಿರುದ್ಧವಾಗಿ ಮಾತನಾಡಬೇಕಾಗುತ್ತದೆ. ಆದರೂ ಕೆಲವು ವಿಷಯಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾದು ನೋಡೋಣ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.





