Mysore
23
overcast clouds
Light
Dark

ಲೋಕಸಮರ 2024: ನಾನು ಎಎಪಿಗೆ ಮತ ಹಾಕುತ್ತೇನೆ ಎಂದ ರಾಹುಲ್‌ ಗಾಂಧಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಶಕ್ತಿ ಪ್ರದರ್ಶನ ತೋರಿಸಿದ್ದಾರೆ. ದೆಹಲಿ ಮಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಹಾಗೂ ನಾನು (ರಾಹುಲ್‌ ಗಾಂಧಿ) ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್‌ ಕಾಂಗ್ರೆಸ್‌ ಪಕ್ಷದ ಗುರುತಿರುವ ಬಟನ್‌ ಒತ್ತಿದರೇ, ನಾನು ಎಎಪಿ ಪಕ್ಷದ ಬಟನ್‌ ಒತ್ತಲಿದ್ದೇನೆ ಎಂದು ಹೇಳುವ ಮೂಲಕ ಇಂಡಿಯಾ ಮೈತ್ರಿ ಕೂಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬುದನ್ನು ಬೃಹತ್‌ ರ್ಯಾಲಿಯಲ್ಲಿ ತೋರಿಸಿದ್ದಾರೆ.

ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ಅದಕ್ಕಾಗಿ ಕಾಂಗ್ರೆಸ್‌ ಮತ್ತು ಎಎಪಿ ಎರಡು ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಮದನ್‌ ಬಿ ಲೋಕೂರ್‌, ಸಜಿತ್‌ ಶಾ ಹಾಗೂ ಹಿರಿಯ ಪತ್ರಕರ್ತ ಎನ್‌. ರಾಮ್‌ ಅವರು ಪ್ರಧಾನಿ ಮೋದಿ ಹಾಗೂ ರಾಹುಲ್‌ ಗಾಂಧಿ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಪತ್ರ ಬರೆದಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಷಯಗಳ ಬಗೆಗಿನ ಚರ್ಚೆಗೆ ಬನ್ನಿ ಎಂದು ಕಾಂಗ್ರೆಸ್‌ ನಾಯಕ ಸವಾಲೆಸೆದರು.