Mysore
29
few clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಚುನಾವಣಾ ವ್ಯವಸ್ಥೆಯನ್ನೇ ಹತ್ತಿಕ್ಕಲಿದೆ: ಕೇಜ್ರಿವಾಲ್‌

ನವದೆಹಲಿ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೇರಿದರೆ ವಿರೋಧ ಪಕ್ಷಗಳ ಎಲ್ಲ ನಾಯಕರೂ ಜೈಲು ಸೇರಬೇಕಾಗುತ್ತದೆ. ಬಿಜೆಪಿಯು ಇಡೀ ಚುನಾವಣಾ ವ್ಯವಸ್ಥೆಯಲ್ಲಿ ಹತ್ತಿಕ್ಕಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅವರಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ಪಿಟಿಐಗೆ ಬುಧವಾರ(ಮೇ.22) ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಿದರೂ, ನನಗೆ ಪ್ರಧಾನಿಯಾಗುವ ಉದ್ದೇಶವಿಲ್ಲ. ಸರ್ವಧಿಕಾರದಿಂದ ದೇಶವನ್ನು ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ತಮ್ಮ ಗುರಿ ಎಂದು ಹೇಳಿದ್ದಾರೆ.

ಇಂಡಿಯಾ ಬಣದಿಂದ ಪ್ರಧಾನಿ ಯಾರಾಗಲಿದ್ದಾರೆ ಎಂಬುದನ್ನು ಲೋಕಸಭಾ ಚುನಾವಣೆ ಫಲಿತಾಂಶ ಜೂನ್‌ ೪ ರಂದು ಪ್ರಕಟಗೊಂಡ ಬಳಿಕ ನಿರ್ಧರಿಸಲಾಗುವುದು. ಇಂಡಿಯಾ ಮೈತ್ರಿಕೂಟ ೩೦೦ ಸ್ಥಾನಗಳನ್ನು ಗೆದ್ದು, ಸರ್ಕಾರ ರಚಿಸಲಿದೆ. ಮೈತ್ರಿಯು ಉತ್ತಮ, ಸ್ಥಿರ ಸರ್ಕಾರ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂಡಿಯಾ ಬಣದ ಪ್ರಧಾನಿ ಅಭ್ಯರ್ಥಿ ಎಂದು ತಮ್ಮನ್ನು ತಾವು ಪರಿಗಣಿಸುತ್ತೀರಾ ಎಂಬ ಪ್ರಶ್ನೆಗೆ ಅಂತಹ ಯಾವ ಉದ್ದೇಶವಿಲ್ಲ. ಕೇವಲ ೨೨ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಅತ್ಯಂತ ಸಣ್ಣ ಪಕ್ಷ ನಮ್ಮದು ಎಂದು ಸ್ಪಷ್ಟಪಡಿಸಿದ್ದಾರೆ.

ರಾಹುಲ್‌ ಗಾಂಧಿ ಪ್ರಧಾನಿಯಾಗುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯಲಿವೆ. ಮೈತ್ರಿಕೂಟದ ನಾಯಕರು ಒಟ್ಟಿಗೆ ಸೇರಿ ನಿರ್ಧರಿಸುತ್ತೇವೆ ಎಂದಿದ್ದಾರೆ.

 

 

Tags: