ನವದೆಹಲಿ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೇರಿದರೆ ವಿರೋಧ ಪಕ್ಷಗಳ ಎಲ್ಲ ನಾಯಕರೂ ಜೈಲು ಸೇರಬೇಕಾಗುತ್ತದೆ. ಬಿಜೆಪಿಯು ಇಡೀ ಚುನಾವಣಾ ವ್ಯವಸ್ಥೆಯಲ್ಲಿ ಹತ್ತಿಕ್ಕಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅವರಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.
ಪಿಟಿಐಗೆ ಬುಧವಾರ(ಮೇ.22) ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಿದರೂ, ನನಗೆ ಪ್ರಧಾನಿಯಾಗುವ ಉದ್ದೇಶವಿಲ್ಲ. ಸರ್ವಧಿಕಾರದಿಂದ ದೇಶವನ್ನು ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ತಮ್ಮ ಗುರಿ ಎಂದು ಹೇಳಿದ್ದಾರೆ.
ಇಂಡಿಯಾ ಬಣದಿಂದ ಪ್ರಧಾನಿ ಯಾರಾಗಲಿದ್ದಾರೆ ಎಂಬುದನ್ನು ಲೋಕಸಭಾ ಚುನಾವಣೆ ಫಲಿತಾಂಶ ಜೂನ್ ೪ ರಂದು ಪ್ರಕಟಗೊಂಡ ಬಳಿಕ ನಿರ್ಧರಿಸಲಾಗುವುದು. ಇಂಡಿಯಾ ಮೈತ್ರಿಕೂಟ ೩೦೦ ಸ್ಥಾನಗಳನ್ನು ಗೆದ್ದು, ಸರ್ಕಾರ ರಚಿಸಲಿದೆ. ಮೈತ್ರಿಯು ಉತ್ತಮ, ಸ್ಥಿರ ಸರ್ಕಾರ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂಡಿಯಾ ಬಣದ ಪ್ರಧಾನಿ ಅಭ್ಯರ್ಥಿ ಎಂದು ತಮ್ಮನ್ನು ತಾವು ಪರಿಗಣಿಸುತ್ತೀರಾ ಎಂಬ ಪ್ರಶ್ನೆಗೆ ಅಂತಹ ಯಾವ ಉದ್ದೇಶವಿಲ್ಲ. ಕೇವಲ ೨೨ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಅತ್ಯಂತ ಸಣ್ಣ ಪಕ್ಷ ನಮ್ಮದು ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ ಪ್ರಧಾನಿಯಾಗುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯಲಿವೆ. ಮೈತ್ರಿಕೂಟದ ನಾಯಕರು ಒಟ್ಟಿಗೆ ಸೇರಿ ನಿರ್ಧರಿಸುತ್ತೇವೆ ಎಂದಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…