ಪುದುಚೇರಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ವಿ.ವೈಥಿಲಿಂಗಂ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿ, ಕೇಂದ್ರಡಳಿತ ಪ್ರದೇಶವಾದ ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಕಾಂಗ್ರೆಸ್ ಮತ್ತು ಡಿಎಂಕೆ ಬದ್ಧವಾಗಿದೆ ಎಂದು ಹೇಳಿದರು.
ಪುದುಚೇರಿಯ ಮುಖ್ಯಮಂತ್ರಿ ಎನ್ ರಂಗಸ್ವಾಮಿ, ಕೇಂದ್ರ ಸರ್ಕಾರದ ವಶದಲ್ಲಿದ್ದಾರೆ. ದೊಡ್ಡ ರಾಜ್ಯಗಳ ಹಕ್ಕುಗಳಷ್ಟೇ ಅಲ್ಲ. ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶಗಳ ಹಕ್ಕುಗಳನ್ನೂ ರಕ್ಷಿಸಬೇಕಿದೆ ಎಂದರು.
10 ವರ್ಷಗಳ ಬಿಜೆಪಿ ಆಡಳಿತದಲ್ಲಿ ಪುದುಚೇರಿಗೆ ಏನೂ ದೊರಕಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದು.
ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಮೋದಿ ಕೊಡುಗೆ ಏನು ಎಂದು ಪ್ರಶ್ನಿಸಿದ ಸ್ಟಾಲಿನ್ ಕರೈಕಲ್‌ನ ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಶ್ರೀಲಂಕಾದಿಂದ ಬಂಧನಕ್ಕೊಳಗಾಗುತ್ತಿದ್ದಾರೆ. ಮೀನಗಾರರ ಸಂಕಷ್ಠ ನಿವಾರಣೆಗೆ ಏನು ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಇತ್ತೀಚೆಗೆ, ಪುದುಚೇರಿಯಲ್ಲಿ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ ನಡೆದಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ. ಮೋದಿ ಆಡಳಿತದಲ್ಲಿ ದೇಶದ ಮಹಿಳೆಯರಿಗೆ ರಕ್ಷೇ ಇಲ್ಲ ಎಂದು ಕಿಡಿಕಾರಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…