Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಗಿ ರದ್ದು: ಸುಪ್ರೀಂ ಸೂಚನೆ

ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಇದರ ಜೊತೆಗೆ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕೋರ್ಟ್‌ ನಿಗದಿಪಡಿಸಿದೆ.

ಉತ್ತರ ಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ.ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ.

ಕಠಿಣ ಕಾನೂನುಗಳ ಹೊರತಾಗಿಯೂ ಭಾರತದಲ್ಲಿ ಮಕ್ಕಳ ಕಳ್ಳಸಾಗಣೆ ಮತ್ತು ಬಲವಂತದ ಬಾಲ ಕಾರ್ಮಿಕ ಪದ್ಧತಿ ಹೆಚ್ಚುತ್ತಿದೆ. ಆದ್ದರಿಂದ ಈ ಕ್ರಮ ಕೈಗೊಳ್ಳಿ ಎಂದು ಖಡಕ್‌ ಸೂಚನೆ ನೀಡಿದೆ.

ಇನ್ನು 2020ರಿಂದ ಸುಮಾರು 80,000 ಮಕ್ಕಳು ಪತ್ತೆಯಾಗುತ್ತಿಲ್ಲ ಎಂದು ಕೇಂದ್ರವು ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು.

Tags: