ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ಇದರ ಜೊತೆಗೆ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕೋರ್ಟ್ ನಿಗದಿಪಡಿಸಿದೆ.
ಉತ್ತರ ಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ.ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ.
ಕಠಿಣ ಕಾನೂನುಗಳ ಹೊರತಾಗಿಯೂ ಭಾರತದಲ್ಲಿ ಮಕ್ಕಳ ಕಳ್ಳಸಾಗಣೆ ಮತ್ತು ಬಲವಂತದ ಬಾಲ ಕಾರ್ಮಿಕ ಪದ್ಧತಿ ಹೆಚ್ಚುತ್ತಿದೆ. ಆದ್ದರಿಂದ ಈ ಕ್ರಮ ಕೈಗೊಳ್ಳಿ ಎಂದು ಖಡಕ್ ಸೂಚನೆ ನೀಡಿದೆ.
ಇನ್ನು 2020ರಿಂದ ಸುಮಾರು 80,000 ಮಕ್ಕಳು ಪತ್ತೆಯಾಗುತ್ತಿಲ್ಲ ಎಂದು ಕೇಂದ್ರವು ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…