ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ.
ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯೂ, 2014ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಪ್ರಧಾನಿ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದು, ಈ ಆದೇಶ ಕೂಡಲೇ ಜಾರಿಗೆ ಬರುವಂತೆ ನೇಮಕಾತಿ ಆದೇಶವನ್ನು ಅನುಮೋದಿಸಿದೆ.
ನಿಧಿ ತಿವಾರಿ ಹಿನ್ನೆಲೆ ಏನು?
ನಿಧಿ ತಿವಾರಿ ಮೂಲತಃ ವಾರಣಾಸಿಯ ಮೆಹಮುರ್ಗಂಜ್ ಮೂಲದವರಾಗಿದ್ದಾರೆ. ಇವರು ತಿವಾರಿ 2013ರ ನಾಗರೀಕ ಸೇವಾ ಪರೀಕ್ಷೆಯಲ್ಲಿ 96ನೇ ರ‍್ಯಾಂಕ್‌ಗಳಿಸಿದ್ದರು. 2016ರಲ್ಲಿ ಅತ್ಯುತ್ತಮ ತರಬೇತಿ ಅಧಿಕಾರಿ ಮತ್ತು ಪ್ರಬಂಧಕ್ಕೆ ರಾಯಭಾರಿ ಇಮಲ್ ಸನ್ಯಾಲ್ ಸ್ಮಾರಕ ಪದಕವನ್ನು ನೀಡಲಾಗಿತ್ತು. ಅಲ್ಲದೇ ತಿವಾರಿ ಅವರನ್ನು 2023ರ ಜನವರಿ 6 ರಿಂದ ಪ್ರಧಾನ ಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಈ ನೇಮಕದ ಮೇರೆಗೆ ಅವರು ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಬಳಿಕ ನಿಧಿ ತಿವಾರಿ ಅವರನ್ನು ಪ್ರಧಾನ ಮಂತ್ರಿ ಕಚೇರಿಯಲ್ಲಿ ಅಧೀನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…