ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮನ್ ಕಿ ಬಾತ್‌ನಲ್ಲಿ ಇತ್ತೀಚೆಗಷ್ಟೇ ನಿಧನರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸಾಧನೆಯನ್ನು ಸ್ಮರಿಸಿದ್ದಾರೆ.
ಮನ್ ಕಿ ಬಾತ್ 126ನೇ ಸಂಚಿಕೆಯಲ್ಲಿ ಎಸ್.ಎಲ್.ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ನಾವೆಲ್ಲಾ ದೇಶ ಕಂಡ ಮಹಾನ್ ವಿಚಾರವಾಗಿ ಹಾಗೂ ಚಿಂತಕ ಎಸ್.ಎಲ್.ಭೈರಪ್ಪ ಅವರನ್ನು ಕಳೆದುಕೊಂಡಿದ್ದೇವೆ. ಅವರೊಂದಿಗೆ ವ್ಯಕ್ತಿಗತ ಸಂಪರ್ಕ ಹೊಂದಿದ್ದೆ. ಅನೇಕ ಸಂದರ್ಭಗಳಲ್ಲಿ ಹಲವು ವಿಚಾರಗಳ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:-ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್, ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ
ಇನ್ನು ಭೈರಪ್ಪ ಅವರ ಅನೇಕ ಕೃತಿಗಳು ಹಲವಾರು ಭಾಷೆಗಳಿಗೆ ಅನುವಾದವಾಗಿದೆ. ನಮ್ಮ ಮೂಲ ಸಂಸ್ಕೃತಿಯ ಬಗ್ಗೆ ಹೆಮ್ಮೆ ಇರಬೇಕು. ಗೌರವ ತೋರಿಸಬೇಕು ಎಂಬುದನ್ನು ಅವರು ನಮಗೆ ಕಲಿಸಿ ಕೊಟ್ಟಿದ್ದಾರೆ. ಅವರ ಅಗಲಿಕೆಗೆ ಭಾವುಕ ವಿದಾಯ ಹೇಳುತ್ತೇನೆ. ಭೈರಪ್ಪ ಅವರೊಂದಿಗಿನ ಒಡನಾಟ ಪ್ರೇರಣದಾಯಕ. ಅವರ ಕೃತಿಗಳು ಯುವ ಜನತೆಗೆ ದಾರಿ ದೀಪವಾಗಿದೆ. ಅವರ ಕೃತಿಗಳನ್ನು ನಮ್ಮ ಯುವಕರು ಹೆಚ್ಚಾಗಿ ಓದಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…