ಇಂದೋರ್ : ಆಯೋದ್ಯಯ ರಾಮಮಂದಿರ ಪ್ರತಿಷ್ಠಾಪನೆಯ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿರುವುದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಇಂದೋರ್ ನಲ್ಲಿ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ `ರಾಷ್ಟ್ರೀಯ ದೇವಿ ಅಹಲ್ಯಾ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದ ಮೋಹನ್ ಭಾಗವತ್ ರಾಮ ಮಂದಿರದ ಪ್ರತಿಷ್ಠಾಪನೆಯ ದಿನವನ್ನು “ಪ್ರತಿಷ್ಠಾ ದ್ವಾದಶಿ” ಎಂದು ಆಚರಿಸಬೇಕು ಎಂದು ಹೇಳಿದ್ದಾರೆ.
ಹಲವಾರು ಶತಮಾನಗಳಿಂದ ಶತ್ರುಗಳ ದಾಳಿ ಎದುರಿಸಿದ ಭಾರತದ ನಿಜವಾದ ಸ್ವಾತಂತ್ರ್ಯವನ್ನು ಪ್ರತಿಷ್ಠಾಪನೆಯ ದಿನ ಸಾಧಿಸಿರುವುದರಿಂದ ಆ ದಿನವನ್ನು ಪ್ರತಿಷ್ಠಾ ದ್ವಾದಶಿ ಎಂದು ಆಚರಿಸಬೇಕು ಎಂದು ಹೇಳಿದ್ದಾರೆ.
ಜನವರಿ 22, 2024ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಒಂದು ಮಹತ್ವದ ಕಾರ್ಯಕ್ರಮದಲ್ಲಿ ಭವ್ಯವಾದ ಅಯೋಧ್ಯೆಯ ದೇವಾಲಯದಲ್ಲಿ ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಲಾಯತು. ಆದರೂ, ಹಿಂದೂ ಕ್ಯಾಲೆಂಡರ್ ಪ್ರಕಾರ, ಜನವರಿ 11, 2025ರಂದು ಸಮಾರಂಭವು ಒಂದು ವರ್ಷವನ್ನು ಪೂರೈಸುತ್ತದೆ. ಕಳೆದ ವರ್ಷ ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಂದರ್ಭದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಎಂದು ಭಾಗವತ್ ಹೇಳಿದರು.



