ದೇಶ- ವಿದೇಶ

ರಾಮಮಂದಿರ ಉದ್ಘಾಟನೆ ದಿನವೇ ನಿಜ ಸ್ವಾತಂತ್ರ್ಯ : ಮೋಹನ್‌ ಭಾಗವತ್

ಇಂದೋರ್ :  ಆಯೋದ್ಯಯ ರಾಮಮಂದಿರ ಪ್ರತಿಷ್ಠಾಪನೆಯ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿರುವುದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಇಂದೋರ್ ನಲ್ಲಿ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ `ರಾಷ್ಟ್ರೀಯ ದೇವಿ ಅಹಲ್ಯಾ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದ ಮೋಹನ್ ಭಾಗವತ್  ರಾಮ ಮಂದಿರದ ಪ್ರತಿಷ್ಠಾಪನೆಯ ದಿನವನ್ನು “ಪ್ರತಿಷ್ಠಾ ದ್ವಾದಶಿ” ಎಂದು ಆಚರಿಸಬೇಕು ಎಂದು ಹೇಳಿದ್ದಾರೆ.

ಹಲವಾರು ಶತಮಾನಗಳಿಂದ ಶತ್ರುಗಳ ದಾಳಿ ಎದುರಿಸಿದ ಭಾರತದ ನಿಜವಾದ ಸ್ವಾತಂತ್ರ್ಯವನ್ನು ಪ್ರತಿಷ್ಠಾಪನೆಯ ದಿನ ಸಾಧಿಸಿರುವುದರಿಂದ ಆ ದಿನವನ್ನು ಪ್ರತಿಷ್ಠಾ ದ್ವಾದಶಿ ಎಂದು ಆಚರಿಸಬೇಕು ಎಂದು ಹೇಳಿದ್ದಾರೆ.

ಜನವರಿ 22, 2024ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಒಂದು ಮಹತ್ವದ ಕಾರ್ಯಕ್ರಮದಲ್ಲಿ ಭವ್ಯವಾದ ಅಯೋಧ್ಯೆಯ ದೇವಾಲಯದಲ್ಲಿ ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಲಾಯತು. ಆದರೂ, ಹಿಂದೂ ಕ್ಯಾಲೆಂಡರ್ ಪ್ರಕಾರ, ಜನವರಿ 11, 2025ರಂದು ಸಮಾರಂಭವು ಒಂದು ವರ್ಷವನ್ನು ಪೂರೈಸುತ್ತದೆ. ಕಳೆದ ವರ್ಷ ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಂದರ್ಭದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಎಂದು ಭಾಗವತ್ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ನ್ಯಾಯಯುತ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ಅಮಾಯಕ ಹಾಗೂ…

1 hour ago

ಜೈಲಿನಿಂದ ಬಿಡುಗಡೆಯಾದ ಬಳಿಕ ನಟ ದರ್ಶನ್‌ ಮೊದಲ ಮಾತು

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಮೊದಲ ಬಾರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೈಸೂರಿನ…

2 hours ago

ಗಾಜಾ ಪಟ್ಟಿಯಲ್ಲಿ ಮುಂದುವರಿದ ಕದನ: ವಾಯುದಾಳಿಯಲ್ಲಿ 30 ಮಂದಿ ಸಾವು

ಜೆರುಸೇಲಂ: ಗಾಜಾ ಪಟ್ಟಿಯಲ್ಲಿ ಕದನ ಮುಂದುವರಿದಿದ್ದು, ಮಂಗಳವಾರ ಇಸ್ರೆಲ್‌ ಸೇನೆ ನಡೆಸಿದ ಪ್ರತ್ಯೇಕ ವಾಯುದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ…

2 hours ago

ಡ್ರಗ್ಸ್‌ ಕೇಸ್:‌ ನಟಿ ರಾಗಿಣಿಗೆ ಬಿಗ್‌ ರಿಲೀಫ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು: ಡ್ರಗ್ಸ್‌ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ನಟಿ ರಾಗಿಣಿ ದ್ವಿವೇದಿ ವಿರುದ್ಧ ಯಾವುದೇ ಸಾಕ್ಷ್ಯ…

2 hours ago

ಮಹಾಕುಂಭಮೇಳದಲ್ಲಿ ಕಮಾಲ್‌ ಮಾಡಿದ ಕೆಎಂಎಫ್‌: ಒಂದು ಕೋಟಿಗೂ ಅಧಿಕ ಟೀ ಮಾರುವ ಗುರಿ

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್‌ ತೆರೆಯಲು ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ. ಇದರ ಜೊತೆಗೆ ನಂದಿನಿ…

2 hours ago

SUFC | ಇಂಟರ್‌ಸಿಟಿ ಫುಟ್ಬಾಲ್‌ ಪಂದ್ಯಾವಳಿಯಲ್ಲಿ ಪುಣೆ ಮೇಲುಗೈ

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಪುಣೆ ತಂಡ ಐದು ವಿಭಾಗದಲ್ಲಿ ನಾಲ್ಕು ಪ್ರಶಸ್ತಿಗಳನ್ನು…

12 hours ago