ಹೊಸದಿಲ್ಲಿ : ಬೆಳಕಿನ ಹಬ್ಬ ದೀಪಾವಳಿ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಹದಗೆಟ್ಟಿದೆ.
ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ ಎಕ್ಯೂಐ ೪೦೦ರ ಗಡಿ ದಾಟಿದೆ. ಮುಂದಿನ ಒಂದು ವಾರದಲ್ಲಿ ಈ ಪ್ರಮಾಣ ೬೦೦ ಗಡಿ ದಾಟಬಹುದು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.
ಇದನ್ನು ಓದಿ: ಸಿಎಂ ಕಾರ್ಯಕ್ರಮದಲ್ಲಿ ನೂಕು ನುಗ್ಗಲು : 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ದೆಹಲಿಯ ೩೮ ಮೇಲ್ವಿಚಾರಣಾ ಕೇಂದ್ರಗಳ ಪೈಕಿ ೨೪ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ತುಂಬಾ ಕಳಪೆ ಮಟ್ಟವನ್ನು ದಾಖಲಿಸಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಇಂದು ಬೆಳಗ್ಗೆ, ಆನಂದ್ ವಿಹಾರ್ ನಗರದಲ್ಲಿ ಅತ್ಯಂತ ವಿಷಕಾರಿ ಗಾಳಿಯನ್ನು ವರದಿ ಮಾಡಿದೆ, ಎಕ್ಯೂಐ ೪೧೭ ರೊಂದಿಗೆ, ಇದು ತೀವ್ರ ಕಳಪೆ ವರ್ಗಕ್ಕೆ ಇಳಿದಿದೆ. ವಜೀರ‍್ಪುರ (೩೬೪), ವಿವೇಕ್ ವಿಹಾರ್ (೩೫೧), ದ್ವಾರಕಾ (೩೩೫), ಮತ್ತು ಆರ‍್ಕೆ ಪುರಂ (೩೨೩) ಸೇರಿದಂತೆ ೧೨ ನಿಲ್ದಾಣಗಳು ಗಾಳಿಯ ಗುಣಮಟ್ಟವನ್ನು ತುಂಬಾ ಕಳಪೆ ವ್ಯಾಪ್ತಿಯಲ್ಲಿ ವರದಿ ಮಾಡಿವೆ. ಸಿಪಿಸಿಬಿ ದತ್ತಾಂಶದ ಪ್ರಕಾರ, ಸಿರಿ ಫೋರ್ಟ್, ದಿಲ್ಶಾದ್ ಗಾರ್ಡನ್ ಮತ್ತು ಜಹಾಂಗೀರ‍್ಪುರಿ ಮುಂತಾದ ಇತರ ಪ್ರದೇಶಗಳು ೩೧೮ ಎಕ್ಯೂಐ ದಾಖಲಿಸಿವೆ. ಪಂಜಾಬಿ ಬಾಗ್ ೩೧೩, ನೆಹರು ನಗರ ೩೧೦, ಅಶೋಕ್ ವಿಹಾರ್ ೩೦೫ ಮತ್ತು ಬವಾನಾ ೩೦೪ರ ವಾಯು ಗುಣಮಟ್ಟ ಸೂಚ್ಯಂಕವನ್ನು ದಾಖಲಿಸಿವೆ.
ದಿಲ್ಲಿಯಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ದಿಲ್ಲಿ-ಎನ್‌ಸಿಆರ್ ಪ್ರದೇಶದಲ್ಲಿ ಗ್ರೇಡೆಡ್ ರೆಸ್ಪಾನ್ಸ್‌ನ ಆಕ್ಷನ್ ಪ್ಲಾನ್ ರಚಿಸಲಾಗಿದೆ. ಆಕ್ಷನ್ ಕ್ವಾಲಿಟಿ ಇಂಡೆಕ್ಸ್ ೩೦೧ ರಿಂದ ೪೦೦ರವರೆಗಿನ ಅತ್ಯಂತ ಕಳಪೆ ವರ್ಗಕ್ಕೆ ಸೇರಿದಾಗ ಇದನ್ನು ಜಾರಿಗೊಳಿಸಲಾಗುತ್ತದೆ.
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…