ನವದೆಹಲಿ: ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿರುವುದರಿಂದ ದೇಶದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಆರು ಮಂದಿಯಲ್ಲಿ ಝೀಕಾ ಸೋಕಿನ ಪ್ರಕರಣಗಳು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಈ ಸೋಂಕು ಹರಡಿದ ನಂತರ ಜನರಲ್ಲಿ ಭಾರೀ ಆತಂಕ ಹೆಚ್ಚಾಗಿದೆ.
ವೈದ್ಯರ ಪ್ರಕಾರ ಈ ವೈರಸ್ ಸೊಳ್ಳೆ ಕಡಿತದಿಂದ ಹರಡುತ್ತದೆ ಮತ್ತು ಮಳೆಗಾಲದಲ್ಲಿ ಇದರ ಅಪಾಯ ಹೆಚ್ಚು. ಝೀಕಾ ವೈರಸ್ ಸೋಂಕು ಗರ್ಭಿಣಿಯರಿಗೆ ಹೆಚ್ಚು ಹಾನಿಯನ್ನುಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ಜನರು ಈ ವೈರಸ್‌ನ್ನು ತಪ್ಪಿಸಲು ಪ್ರಯತ್ನಿಸಬೇಕು ಮತ್ತು ರೋಗಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಬೇಕು.
ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಮಳೆಯಲ್ಲಿ ಅಪಾಯದ ಪ್ರಮಾಣವು ಹೆಚ್ಚಾಗುತ್ತದೆ. ಡೆಂಗ್ಯೂ ಮತ್ತು ಚಿಕನ್‌ಗುನ್ಯಾದಂತೆ ಝೀಕಾ ವೈರಸ್ ಕೂಡಾ ಒಂದು ಸೋಂಕು. ಇದರ ಸೋಂಕಿಗೆ ಒಳಗಾದಾಗ ಜನರು ಜ್ವರ, ತಲೆನೋವು, ಕೀಲುನೋವು, ಸ್ನಾಯುನೋವು, ಕೆಂಪು ಕಣ್ಣುಗಳು ಮತ್ತು ಚರ್ಮದ ದದ್ದುಗಳಂತಹ ರೋಗಲಕ್ಷಣಗಳು ಕಂಡು ಬರುತ್ತವೆ.
ಆದ್ದರಿಂದ ಎಲ್ಲರೂ ಕೂಡ ತಪಾಸಣೆ ಮಾಡಿಸಿಕೊಳ್ಳಿ. ಆಸ್ಪತ್ರೆಗಲ್ಲಿ ರೋಗ ಲಕ್ಷಣದ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತದೆ. ಝೀಕಾ ವೈರಸ್‌ಗೆ ನಿಖರವಾದ ಔಷಧಿ ಇಲ್ಲ. ಯಾರೂ ಕೂಡ ಝೀಕಾ ವೈರಸ್ ಬಗ್ಗೆ ಅಸಡ್ಡೆ ಮಾಡಬೇಡಿ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…