ಭಾರತ-ಪಾಕ್‌ ನಡುವೆ ಮುಂದುವರಿದ ಸಮರ: ಮೂರು ಸೇನಾಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ದಾಳಿ ಮುಂದುವರಿದಿರುವ ಬೆನ್ನಲ್ಲೇ ಮೂರು ಸೇನಾ ಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ.

ಪಾಕ್‌ ಮೇಲೆ ಭಾರತೀಯ ಸೇನೆ ದಾಳಿಯನ್ನು ತೀವ್ರಗೊಳಿಸಿದ್ದು, ಪಾಕಿಸ್ತಾನ ಗಢ ಗಢ ನಡುಗುವಂತೆ ಮಾಡಿದೆ. ಪಾಕಿಸ್ತಾನ ಯಾವ ರೀತಿಯಲ್ಲೂ ಊಹಿಸದ ಹಾಗೆ ಭಾರತೀಯ ಸೇನೆ ದಾಳಿ ಮುಂದುವರಿಸಿದ್ದು, ಪಾಕಿಸ್ತಾನ ಪತರುಗುಟ್ಟುವಂತೆ ಮಾಡಿದೆ.

ಈ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮೂರು ಸೇನಾಪಡೆಗಳ ಮುಖ್ಯಸ್ಥರು ಭೇಟಿ ನೀಡಿದ್ದು, ಮೋದಿ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಇಡಿಎಸ್‌ ಅನಿಲ್‌ ಚೌಹಾಣ್‌ ಸಹ ಹಾಜರಿದ್ದರು.

ಇದನ್ನೂ ಓದಿ:- ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂಗೆ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ 

ಸಭೆಯಲ್ಲಿ ಪಾಕ್‌ ಜೊತೆಗಿನ ಸಂಘರ್ಷದ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ದಾಳಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇನಾಪಡೆ ಮುಖ್ಯಸ್ಥರ ಜೊತೆ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನು ಪಾಕ್‌ ವಿರುದ್ಧ ಭಾರತದ ಮುಂದಿನ ಹೆಜ್ಜೆ ಏನು ಎನ್ನುವುದು ತೀವ್ರ ಕೂತೂಹಲ ಮೂಡಿಸಿದೆ. ಆದರೆ ಪಾಕ್‌ ಶರಣಾಗುವವರೆಗೂ ಭಾರತ ಯುದ್ಧ ನಿಲ್ಲಿಸಲ್ಲ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago