mallikharjuna kharge
ನವದೆಹಲಿ: ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಯನ್ನು ವಿರೋಧಿಸುವುದಾಗಿ ಇಂಡಿಯಾ ಮೈತ್ರಿಕೂಟ ಘೋಷಿಸಿದೆ. ನವೆಂಬರ್ 30ರಂದು ಲೋಕಸಭೆಯಲ್ಲಿ ಮಸೂದೆ ಚರ್ಚೆಗೆ ಬರುವ ನಿರೀಕ್ಷೆಯಿದೆ.
ಲೋಕಸಭೆಯ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸುವ ಕೇಂದ್ರದ ಪ್ರಸ್ತಾವವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಲೋಕಸಭೆ ವಿಸ್ತರಣೆಯ ಮೂಲಕ ಅಧಿಕಾರವನ್ನು ಕೇಂದ್ರೀಕರಿಸಿ, ಅದನ್ನು ತನ್ನಲ್ಲೇ ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿಯ ಹಿಂದಿನ ‘400 ಪಾರ್’ ಘೋಷಣೆಯನ್ನು ಪ್ರಸ್ತಾಪಿಸಿದ ಖರ್ಗೆ, ಈಗ ‘800 ಪಾರ್’ ಗುರಿ ಇಟ್ಟುಕೊಂಡಿದೆ ಎಂದು ಟೀಕಿಸಿದ್ದಾರೆ.
ಮಸೂದೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಹಿತಾಸಕ್ತಿಗಳಿಗೆ ಸಾಕಷ್ಟು ರಕ್ಷಣೆ ಇಲ್ಲ ಎಂದಿರುವ ಖರ್ಗೆ, ಮಸೂದೆಗೆ ಬೆಂಬಲ ಘೋಷಿಸಿದ ಡಿಎಂಕೆ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಮೈತ್ರಿಕೂಟದ ಸಭೆಗೆ ಗೈರಾಗಿತ್ತು.
ಬೆಂಗಳೂರು: ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಲೋಕಸಭಾ ಸ್ಥಾನಗಳ ಸಂಖ್ಯೆ…
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಭರವಸೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು…
ನವದೆಹಲಿ: ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಿಸಿದೆ. ಮುಂದಿನ ವಾರ ಸಂಸತ್ತಿನಲ್ಲಿ ಈ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ…
ಇಂದಿನ ದುಬಾರಿ ಕಾಲದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವೈಭವದ ಮದುವೆಗಳನ್ನು ನಡೆಸಬೇಕೆ ಎಂಬ ಪ್ರಶ್ನೆ ಏಳುತ್ತದೆ. ಮದುವೆ ಹೇಗೆ…
ಮೈಸೂರಿನ ಹೃದಯಭಾಗದಲ್ಲಿ ಇರುವ ಮಹಾರಾಜ ಕಾಲೇಜು ಮೈದಾನ ಲಕ್ಷಾಂತರ ಜನರು ಸೇರುವ ದೊಡ್ಡ ದೊಡ್ಡ ಕಾರ್ಯಕ್ರಮಗಳಿಗೆ ಸೂಕ್ತವಲ್ಲ. ಗುರುವಾರ ನಡೆದ…
ಸರಗೂರು ತಾಲ್ಲೂಕು ಕಚೇರಿಗೆ ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಸಾಕಷ್ಟು ಜನರು ಬರುತ್ತಾರೆ. ಅವರಲ್ಲಿ ಹಿರಿಯರು, ಹೆಂಗಸರು, ವಿದ್ಯಾರ್ಥಿಗಳೂ ಇರುತ್ತಾರೆ.…