ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ ಹಾಕಿವೆ.
ಅಂತರಾಷ್ಟ್ರೀಯ ಗಮನ ಸೆಳೆಯುತ್ತಿರುವ ಈ ಒಪ್ಪಂದ ಎರಡು ಶತಕೋಟಿ ಜನರ ಮಾರುಕಟ್ಟೆಯನ್ನು ಸೃಷ್ಟಿಸುತ್ತದೆ. ಜಾಗತಿಕ ಜಿಡಿಪಿ ಒಟ್ಟು ದೇಶೀಯ ಉತ್ಪನ್ನದ ಸುಮಾರು ಕಾಲು ಭಾಗದಷ್ಟು ಪಾಲನ್ನು ಹೊಂದಿರುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.
ಈ ವ್ಯಾಪಾರ ಒಪ್ಪಂದವು ಭಾರತಕ್ಕೆ ಪ್ರವೇಶಿಸುವ ಯುರೋಪಿಯನ್ ಒಕ್ಕೂಟದ ರಫ್ತಿನ ಸುಮಾರು ಶೇಕಡಾ.97ರಷ್ಟು ಮೇಲಿನ ಸುಂಕವನ್ನು ಕಡಿತಗೊಳಿಸುತ್ತದೆ. ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೃಢಪಡಿಸಿದ್ದಾರೆ. ಈ ಬೆಳವಣಿಗೆಯು ಅಮೇರಿಕಾವನ್ನು ಕೆರಳಿಸಿದಂತೆ ಕಂಡುಬಂದಿದೆ.
ಇದು ಯುರೋಪಿಯನ್ ಒಕ್ಕೂಟ ಹಾಗೂ ಭಾರತ ಎರಡೂ ಇದುವರೆಗೆ ಮಾಡಿಕೊಂಡಿರುವ ಅತಿದೊಡ್ಡ ವ್ಯಾಪಾರ ಒಪ್ಪಂದವಾಗಿದೆ.
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…