Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ದೇಶದಲ್ಲಿ ಅನ್ಯಾಯದ ಕತ್ತಲೆ ಆವರಿಸಿದೆ, ನ್ಯಾಯದ ಬೆಳಕು ತರಬೇಕು: ಸೋನಿಯಾ ಗಾಂಧಿ

ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಬದಲಾಣೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ರಾಜಸ್ಥಾನದ ಜೈಪುರದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ವಿವಿಧ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ 10 ವರ್ಷಗಳಿಂದ ದೇಶದಲ್ಲಿ ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆ ಹೆಚ್ಚಾಗುತ್ತಿದೆ. ಇವೆಲ್ಲವನ್ನೂ ಸರ್ಕಾರವೇ ಉತ್ತೇಜಿಸುತ್ತಿದೆ. ಮೋದಿ ಸರ್ಕಾರ ಏನು ಮಾಡಿದೆ ಎಂಬುದು ನಮ್ಮೆಲ್ಲರ ಮುಂದಿದೆ. ಎಲ್ಲೆಡೆ ಅನ್ಯಾಯದ ಕತ್ತಲೆ ಆವರಿಸಿದೆ. ನಾವೆಲ್ಲರೂ ಇದರ ವಿರುದ್ಧ ಹೋರಾಡಬೇಕು, ನ್ಯಾಯದ ಬೆಳಕನ್ನು ತರಬೇಕು ಎಂದು ಅವರು ಹೇಳಿದರು.

ತಮ್ಮನ್ನು ತಾವು ಶೇಷ್ಠ ಎಂದು ಪರಿಗಣಿಸಿರುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ಬಿಜೆಪಿ ಸರ್ಕಾರವು ಸರ್ವಾಧಿಕಾರಿಯಾಗಿದ್ದು, ನಾವೇಲ್ಲರೂ ಇದಕ್ಕೆ ಉತ್ತರ ನೀಡುತ್ತೇವೆ ಎಂದರು.

Tags: