ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಬದಲಾಣೆಗೆ ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ರಾಜಸ್ಥಾನದ ಜೈಪುರದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ವಿವಿಧ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.
ಕಳೆದ 10 ವರ್ಷಗಳಿಂದ ದೇಶದಲ್ಲಿ ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆ ಹೆಚ್ಚಾಗುತ್ತಿದೆ. ಇವೆಲ್ಲವನ್ನೂ ಸರ್ಕಾರವೇ ಉತ್ತೇಜಿಸುತ್ತಿದೆ. ಮೋದಿ ಸರ್ಕಾರ ಏನು ಮಾಡಿದೆ ಎಂಬುದು ನಮ್ಮೆಲ್ಲರ ಮುಂದಿದೆ. ಎಲ್ಲೆಡೆ ಅನ್ಯಾಯದ ಕತ್ತಲೆ ಆವರಿಸಿದೆ. ನಾವೆಲ್ಲರೂ ಇದರ ವಿರುದ್ಧ ಹೋರಾಡಬೇಕು, ನ್ಯಾಯದ ಬೆಳಕನ್ನು ತರಬೇಕು ಎಂದು ಅವರು ಹೇಳಿದರು.
ತಮ್ಮನ್ನು ತಾವು ಶೇಷ್ಠ ಎಂದು ಪರಿಗಣಿಸಿರುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ಬಿಜೆಪಿ ಸರ್ಕಾರವು ಸರ್ವಾಧಿಕಾರಿಯಾಗಿದ್ದು, ನಾವೇಲ್ಲರೂ ಇದಕ್ಕೆ ಉತ್ತರ ನೀಡುತ್ತೇವೆ ಎಂದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…