ನವದೆಹಲಿ: ಭಾರತ ಅತೀಹೆಚ್ಚು ಪ್ರಮಾಣದಲ್ಲಿ ಆಹಾರ ಪದಾರ್ಥಗಳನ್ನು ಉತ್ಪಾದಿಸುವ ರಾಷ್ಟ್ರವಾಗಿದೆ. ಹಾಗಾಗಿ ಜಾಗತಿಕ ಆಹಾರ ಮತ್ತು ಪೌಷ್ಠಿಕತೆಯ ಭದ್ರತೆಗೆ ಮಾರ್ಗೋಪಾಯ ಹುಡುಕುವ ಕೆಲಸ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಬಗ್ಗೆ 32ನೇ ಕೃಷಿ ಅರ್ಥಶಾಸ್ತ್ರಜ್ಞರ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, 2024-25ನೇ ಸಾಲಿನ ಬಜೆಟ್‌ನಲ್ಲಿ ಸುಸ್ಥಿರ ಕೃಷಿ ಮತ್ತು ಹವಾಮಾನ ಆಧಾರಿತ ಕೃಷಿ ಚಟುವಟಿಕೆಗಳಿಗೆ ಒತ್ತು ನೀಡಲಾಗಿದೆ ಎಂದರು.
ಭಾರತ ಮೊದಲು ಕೃಷಿ ಮತ್ತು ಆಹಾರ ಭದ್ರತೆಯ ಸವಾಲುಗಳನ್ನು ಎದುರಿಸುತ್ತಿತ್ತು. ಪ್ರಸ್ತುತ ಹಾಲು, ಬೇಳೆಕಾಳು ಮತ್ತು ಸಾಂಬಾರು ಪದಾರ್ಥಗಳ ಉತ್ಪಾದನೆಯಲ್ಲಿ ಭಾರತ ಭಾರೀ ಮುಂಚೂಣಿಯಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಆಹಾರ ಧಾನ್ಯಗಳು, ಹಣ್ಣುಗಳು, ತರಕಾರಿ, ಹತ್ತಿ, ಸಕ್ಕರೆ ಮತ್ತು ಚಹಾ ಉತ್ಪಾದನೆಯಲ್ಲಿ ಜಾಗತಿಕ ಮಟ್ಟದಲ್ಲಿ ಭಾರತ ಎರಡನೇ ಅತಿದೊಡ್ಡ ರಾಷ್ಟ್ರವಾಗಿದೆ ಎಂದರು.
ಆದ್ದರಿಂದಲೇ ಕೇಂದ್ರ ಬಜೆಟ್‌ನಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡಲಾಗಿದೆ. ಸಾಂಬಾರು ಪದಾರ್ಥಗಳ ಉತ್ಪಾದನೆಯಲ್ಲಿ ಭಾರತ ಇನ್ನೂ ಹೆಚ್ಚಿನ ಗುರಿ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…