ದೇಶ- ವಿದೇಶ

ಭಾರತ ಈಗ ವಿಶ್ವದ ಕಾರ್ಖಾನೆಯಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ್‌ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರವರಿ.26ರಂದು ಪ್ರಯಾಗ್‌ರಾಜ್‌ನಲ್ಲಿ ಏಕತೆತ ಮಹಾಕುಂಭಮೇಳ ಮುಕ್ತಾಯಗೊಂಡಿತು. ನದಿ ದಂಡೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ಸ್ಥಳದಲ್ಲಿ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡಲು ಹೇಗೆ ಬರುತ್ತಾರೆ ಎಂಬುದನ್ನು ನೋಡಿ ಜಗತ್ತು ಬೆರಗುಗೊಂಡಿದೆ ಎಂದರು.

ಭಾರತದ ಸಂಘಟನಾ ಮತ್ತು ನಾವೀನ್ಯತೆ ಕೌಶಲ್ಯಗಳನ್ನು ಜಗತ್ತು ಗಮನಿಸುತ್ತಿದೆ. ಜಗತ್ತು ಈ ಭಾರತವನ್ನು ವಿವರವಾಗಿ ತಿಳಿದುಕೊಳ್ಳಲು ಬಯಸುತ್ತದೆ. ಭಾರತವು ವಿಶ್ವದ 7ನೇ ಅತಿದೊಡ್ಡ ಕಾಫಿ ರಫ್ತುದಾರ ರಾಷ್ಟ್ರವಾಗಿದೆ. ದಶಕಗಳಿಂದ ಜಗತ್ತು ಭಾರತವನ್ನು ತನ್ನ ಬ್ಯಾಕ್‌ ಆಫೀಸ್‌ ಎಂದು ಕರೆಯುತ್ತಿತ್ತು. ಅದರಿಂದು ಭಾರತವು ವಿಶ್ವದ ಹೊಸ ಕಾರ್ಖಾನೆಯಾಗುತ್ತಿದೆ. ನಾವು ಕೇವಲ ಕಾರ್ಯಪಡೆಯಲ್ಲ. ನಾವು ವಿಶ್ವ ಶಕ್ತಿಯಾಗಿದ್ದೇವೆ ಎಂದು ಬಣ್ಣಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

26 mins ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

41 mins ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

1 hour ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago